ಮಂಗಳೂರು : ಪೊಲೀಸರಿಂದ ನಡೆದಿದೆ ಎನ್ನಲಾದ ಐಷಾರಾಮಿ ಕಾರು ಮಾರಾಟದ ತನಿಖೆಯನ್ನು ಸಿಐಡಿ ಎಸ್ಪಿ ಹಂತದ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಸಿಐಡಿ ಇನ್‌ಸ್ಪೆಕ್ಟರ್ ಈವರೆಗೆ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ, ತನಿಖೆ ಹಾದಿತಪ್ಪುತ್ತಿರುವ ಶಂಕೆಯ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿ ಎಸ್ಪಿ ಹಂತಕ್ಕೆ ಹಸ್ತಾಂತರಿಸಲಾಗಿದೆ. ಇದೀಗ ಸಿಐಡಿ ಎಸ್ಪಿ ರಮೇಶ್ ಎಂಬವರು ಮಂಗಳೂರಿಗೆ ಆಗಮಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಓದಿ : ಐಷಾರಾಮಿ ಕಾರು ಮಾರಾಟ ಪ್ರಕರಣ: ಸಿಐಡಿಯಿಂದ ಸಿಸಿಬಿ ಪೊಲೀಸರ ವಿರುದ್ಧ ತನಿಖೆ ಆರಂಭ
ಬಾಕಿ ಉಳಿದ ತನಿಖೆಯನ್ನು ಇನ್‌ಸ್ಪೆಕ್ಟರ್ ಬದಲು ಎಸ್ಪಿ ಹಂತದ ಅಧಿಕಾರಿಗೆ ವರ್ಗಾಯಿಸಲಾಗಿದೆ. ಸಿಐಡಿ ರೋಹಿಣಿ ಕಟ್ಟೋಚ್ ಬದಲು ಎಸ್ಪಿ ರಮೇಶ್ ಅವರಿಗೆ ಸಮಗ್ರ ತನಿಖೆ ನಡೆಸುವಂತೆ ಸಿಐಡಿ ಉನ್ನತಾಧಿಕಾರಿಗಳು ಆದೇಶಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಅದಕ್ಕೆ ನೆರವಾದವರಿಗೆ ನೋಟಿಸ್ ನೀಡಿದ್ದು, ವಿಚಾರಣೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.