ಪುತ್ತೂರು (ದಕ್ಷಿಣ ಕನ್ನಡ): ಅತಿಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸ್ಮಶಾನ ಜಾಗವನ್ನು ತೆರವುಗೊಳಿಸಿದ ಘಟನೆ ಜಿಲ್ಲೆಯ ಸುಳ್ಯಕೊಡಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಸ್ಮಶಾನ ಜಾಗ ಒತ್ತುವರಿ: ತಹಶೀಲ್ದಾರ್ ನೇತೃತ್ವದಲ್ಲಿ ಬೇಲಿ ತೆರವು - Clearing of acquiring place in dakshina kannada
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಗ್ರಾಮವೊಂದರಲ್ಲಿ ಒತ್ತುವರಿ ಮಾಡಿಕೊಂಡ ಸ್ಮಶಾನದ ಜಾಗವನ್ನು ತಹಶೀಲ್ದಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ತಹಶೀಲ್ದಾರ್ ನೇತೃತ್ವದಲ್ಲಿ ಬೇಲಿ ತೆರವು
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರಿಯಾಣ ಎಂಬಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಮೀಸಲಿರಿಸಿದ್ದ ಜಾಗವನ್ನು ಸ್ಥಳೀಯ ನಿವಾಸಿ ಅತಿಕ್ರಮಣ ಮಾಡಿದ್ದಾರೆ ಎಂದು ಸಾರ್ವಜನಿಕರು ಪುತ್ತೂರು ಆಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ, ಬೇಲಿ ತೆರವುಗೊಳಿಸಿದ ಘಟನೆ ಏಪ್ರಿಲ್ 30 ರಂದು ನಡೆದಿದೆ.
ತಹಶೀಲ್ದಾರ್ ಹಾಗೂ ಕಂದಾಯ ಇಲಾಖಾಧಿಕಾರಿಗಳು ಸೇರಿ ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.