ಕರ್ನಾಟಕ

karnataka

ETV Bharat / state

ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಬೊಮ್ಮಾಯಿ - ETV Bharat kannada News

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

Chief Minister Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Apr 12, 2023, 6:52 PM IST

Updated : Apr 12, 2023, 8:10 PM IST

ಧರ್ಮಸ್ಥಳದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಬೆಳ್ತಂಗಡಿ (ದಕ್ಷಿಣ ಕನ್ನಡ) :ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದರು. ನಾಳೆ ಕಟೀಲು, ಸೋಮೇಶ್ವರ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆಯಲಿದ್ದಾರೆ.

ಧರ್ಮಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಪ್ರತಿ ಚುನಾವಣೆಗೆ ಮೊದಲು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೆ. ಅದರಂತೆ ಈ ಬಾರಿಯೂ ಭೇಟಿ ನೀಡಿದ್ದೇನೆ. ಕನ್ನಡ ನಾಡಿನ ಸುಭೀಕ್ಷೆಗಾಗಿ, ಸತ್ಯಕ್ಕಾಗಿ ಜಯ ಸಿಗುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು.

ಟಿಕೆಟ್ ವಂಚಿತರೊಂದಿಗೆ ಪಕ್ಷದ ವರಿಷ್ಠರು ಮಾತನಾಡಿದ್ದಾರೆ. ಅವರನ್ನು ಶಾಸಕರಾಗಿ ಮಾಡಿರೋದು ಕೂಡಾ ಬಿಜೆಪಿ. ಪಕ್ಷವು ಗೌರವಪೂರ್ವಕವಾಗಿಯೇ ನಡೆಸಿಕೊಂಡಿದೆ. ರಾಜಕೀಯ ಭವಿಷ್ಯ ಕೂಡಾ ಸುರಕ್ಷಿತವಾಗಿಯೇ ಇರಲಿದೆ ಎಂದು ಹೇಳಿದರು.

ಇದನ್ನೂ ಓದಿ :ವರ್ಷಗಟ್ಟಲೆ ಟಿಕೆಟ್​ ಕೇಳಲು ಆಗಲ್ಲ.. ಮತ್ತೊಮ್ಮೆ ಪರಾಮರ್ಶಿಸಿ ನನಗೆ ಟಿಕೆಟ್​ ಕೊಡಿ: ಪಟ್ಟಣಶೆಟ್ಟಿ

ಲಕ್ಷ್ಮಣ್​ ಸವದಿಯವರು ಬೇಸರದಿಂದ ಪ್ರತಿಕ್ರಿಯೆ ನೀಡಿದ್ದಾರೆ. ಟಿಕೆಟ್ ದೊರಕದಿದ್ದಾಗ ಅಸಮಾಧಾನ ಸಹಜ. ಅವರಿಗೆ ಪಕ್ಷದೊಂದಿಗೆ ಉತ್ತಮ ಸಂಬಂಧವಿದೆ. ನನ್ನೊಂದಿಗೂ ಬಹಳ ಹತ್ತಿರದ ಸಂಬಂಧವಿದೆ.‌ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ.‌ ನಾಳೆ, ನಾಡಿದ್ದರಲ್ಲಿ 2ನೇ ಪಟ್ಟಿಯೂ ಬಿಡುಗಡೆಯಾಗಲಿದೆ ಎಂದರು.

ವಿನಯ ಕುಲಕರ್ಣಿ ತಮ್ಮ ಎದುರಾಳಿಯಾಗಿ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿ, ಬಿಜೆಪಿ ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನನ್ನ ಎದುರಾಳಿಯಾಗಿ ಯಾರು ಸ್ಪರ್ಧಿಸುತ್ತಾರೆ ಎಂಬುದು ನನಗೆ ಮುಖ್ಯವಲ್ಲ. ನನಗೆ ನನ್ನ ಕ್ಷೇತ್ರದ ಜನರು ಮುಖ್ಯ. ಯಾರೇ ಆದರೂ ಚುನಾವಣೆಯಲ್ಲಿ ಎದುರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ :ಮೊದಲ ಪಟ್ಟಿಯೇ ಗೆಲುವಿಗೆ ದಿಕ್ಸೂಚಿ, ಇನ್ನೆರಡು ದಿನದಲ್ಲಿ ಎರಡನೇ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ಟಿಕೆಟ್ ಘೋಷಣೆಯ ನಂತರ ಹಲವರಿಂದ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿದ ಸಿಎಂ, ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಹೇಳುತ್ತಿದ್ದಾರೆ. ರಾಜಕೀಯದಿಂದ ನಿವೃತ್ತಿಯ ಬಗ್ಗೆ ಹೇಳಿಲ್ಲ. ಈಶ್ವರಪ್ಪರೊಂದಿಗೆ ವರಿಷ್ಠರು ಮಾತನಾಡುತ್ತಾರೆ. ಸಚಿವ ಎಸ್.ಅಂಗಾರ ಜಂಟಲ್‌ಮ್ಯಾನ್. ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ಹೇಳಿದರು.

ಸಿಎಂ ಹೆಲಿಕಾಪ್ಟರ್ ತಪಾಸಣೆ

ಸಿಎಂ ಹೆಲಿಕಾಪ್ಟರ್ ತಪಾಸಣೆ:ಧರ್ಮಸ್ಥಳಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಹಾಗೂ ಅವರು ಸಂಚಾರಿಸುವ ವಾಹನ, ಬ್ಯಾಗ್ ಮತ್ತು ಅದರ ದಾಖಲೆಗಳನ್ನು ತಪಾಸಣೆ ನಡೆಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ನಿರ್ದೇಶನದಂತೆ ತಪಾಸಣೆ ನಡೆಸಿದ ಬಳಿಕ ಸಿಎಂ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದರು.

ಇದನ್ನೂ ಓದಿ:ತುಮಕೂರು 11 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ: ಬಿರುಸುಗೊಂಡ ರಾಜಕೀಯ ಚಟುವಟಿಕೆ

Last Updated : Apr 12, 2023, 8:10 PM IST

ABOUT THE AUTHOR

...view details