ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣದ ಪ್ರಯುಕ್ತ ಮಂಗಳೂರಿಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಭೇಟಿಯಾದರು.