ಕರ್ನಾಟಕ

karnataka

ETV Bharat / state

ಬಿಜೆಪಿ ಕಾರ್ಯಕಾರಿಣಿ ಸಭೆ: ನಾಳೆ ಮಂಗಳೂರಿಗೆ ತೆರಳಲಿರುವ ಸಿಎಂ ಬಿಎಸ್​​​ವೈ - CM Yeddyurappa travel to Mangalore tomorrow

ನಾಳೆ ರಾತ್ರಿ 7 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಸಿಎಂ ಯಡಿಯುರಪ್ಪ, ನ.5 ರಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ಮಂಗಳೂರಿಗೆ ತರಳಲಿರುವ ಸಿಎಂ ಯಡಿಯೂರಪ್ಪ
ನಾಳೆ ಮಂಗಳೂರಿಗೆ ತರಳಲಿರುವ ಸಿಎಂ ಯಡಿಯೂರಪ್ಪ

By

Published : Nov 3, 2020, 11:46 AM IST

ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.

ನವೆಂಬರ್ 5 ರಂದು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಒಂದು ದಿನ ಮುಂಚಿತವಾಗಿಯೇ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಲಿದ್ದಾರೆ.

ನಾಳೆ ರಾತ್ರಿ 7 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 5 ರಂದು ಮಂಗಳೂರು ಕೊಡಿಯಾಲ್ ಬೈಲ್​ನಲ್ಲಿರುವ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದಾರೆ.

ಬೆಳಗ್ಗೆ 11.30 ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ವಿಶೇಷ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ರಾತ್ರಿ 7.35 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

For All Latest Updates

TAGGED:

ABOUT THE AUTHOR

...view details