ಕರ್ನಾಟಕ

karnataka

ETV Bharat / state

ಪುತ್ತೂರು ವಿದ್ಯಾರ್ಥಿನಿ ಗ್ಯಾಂಗ್​​ ರೇಪ್ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರ - puttur gang rape

ಪುತ್ತೂರು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರು ತಿರಸ್ಕರಿಸಿದ್ದಾರೆ.

putturu gang rape case

By

Published : Sep 12, 2019, 8:16 PM IST

ಮಂಗಳೂರು:ಭಾರೀ ಸಂಚಲನ ಉಂಟುಮಾಡಿದ್ದ ಪುತ್ತೂರು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ತಿರಸ್ಕರಿಸಿದೆ.

ವಿದ್ಯಾರ್ಥಿನಿಯ ಮೇಲೆ ಕಳೆದ ಫೆಬ್ರವರಿಯಲ್ಲಿ ಐವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ದೃಶ್ಯವನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಸುಮೊಟೋ ಕೇಸ್ ದಾಖಲಿಸಿ ತನಿಖೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳಾದ ಗುರುನಂದನ್ (19), ಪ್ರಜ್ವಲ್ (19), ಕಿಶನ್(19), ಸುನಿಲ್(19), ಪ್ರಖ್ಯಾತ್ (19) ಎಂಬ ಐವರು ವಿದ್ಯಾರ್ಥಿಗಳನ್ನು ಬಂಧಿಸಿ ಅತ್ಯಾಚಾರ ಹಾಗೂ ಅಟ್ರಾಸಿಟಿ ಕೇಸ್ ದಾಖಲಿಸಲಾಗಿತ್ತು.

ಪ್ರಕರಣದ ಆರೋಪಿಗಳು ಪುತ್ತೂರಿನ ಐದನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯು ಇಂದು ವಿಚಾರಣೆಗೆ ಬಂದಿತ್ತು. ಆದರೆ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದೆ.

ABOUT THE AUTHOR

...view details