ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ರಾಜ್ಯದಲ್ಲಿ ಈಗಾಗಲೇ ಭೌತಿಕ ತರಗತಿಗಳು ಆರಂಭವಾಗಿದ್ದರೂ, ಕೇರಳದಲ್ಲಿ ಕೊರೊನಾ ಹೆಚ್ಚಾಗಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ತರಗತಿಗಳು ಪುನಾರಂಭಗೊಂಡಿವೆ.
ಕೇರಳ ರಾಜ್ಯದ ವಿದ್ಯಾರ್ಥಿಗಳು ದ.ಕ ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಳಂಬವಾಗಿ ತರಗತಿಗಳನ್ನು ಆರಂಭಿಸಲಾಗಿದೆ. ಲಸಿಕೆ ಪಡೆದ ಶೇ. 50ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಆದರೆ ಹೆಚ್ಚಿನ ಸಂಖ್ಯೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 17-18ರ ವಯಸ್ಸಿನ ಆಸುಪಾಸಿನಲ್ಲಿ ಇರುವ ಕಾರಣ ಅಂಥವರಿಗೆ ಇನ್ನೂ ಲಸಿಕೆ ನೀಡಲಾಗಿಲ್ಲ. ಅಲ್ಲದೆ ಹೆಚ್ಚಿನ ವಿದ್ಯಾರ್ಥಿಗಳು ಆನ್ಲೈನ್ ತರಗತಿಯನ್ನೇ ಆಯ್ಕೆ ಮಾಡಿರುವುದರಿಂದ ಭೌತಿಕ ತರಗತಿಗೆ ವಿರಳ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಭೌತಿಕ ತರಗತಿಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚದ್ದು, ಪ್ರಾಧ್ಯಾಪಕರು ಹಾಗೂ ಇತರ ಸಿಬ್ಬಂದಿ ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು ಮತ್ತು ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಯೇ ತರಗತಿಗಳನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ:ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ಅಸಮಾಧಾನ; ಬೊಮ್ಮಾಯಿ ನೆರವಿಗೆ ಧಾವಿಸಲಿದ್ದಾರಾ ಅಮಿತ್ ಶಾ?