ಮಂಗಳೂರು:ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಇಂದು ಬೆಳಗ್ಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಮೂಡಿಸಿತ್ತು. ಬಜಪೆ ಪೊಲೀಸರು ಮತ್ತು ಏರ್ಪೋರ್ಟ್ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದು, ಅನುಮಾನಾಸ್ಪದ ಬ್ಯಾಗ್ಅನ್ನು ಸಿಎಎಸ್ಎಫ್ ಸಿಬ್ಬಂದಿ ಪರಿಶೀಲಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ: ಪೊಲೀಸ್ ಆಯುಕ್ತರು ಹೇಳಿದ್ದೇನು? - ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ
ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಇಂದು ಬೆಳಗ್ಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಮೂಡಿಸಿತ್ತು. ಬಜಪೆ ಪೊಲೀಸರು ಮತ್ತು ಏರ್ಪೋರ್ಟ್ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದು, ಅನುಮಾನಾಸ್ಪದ ಬ್ಯಾಗ್ಅನ್ನು ಸಿಎಎಸ್ಎಫ್ ಸಿಬ್ಬಂದಿ ಪರಿಶೀಲಿಸಿದ್ದಾರೆ.
![ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ: ಪೊಲೀಸ್ ಆಯುಕ್ತರು ಹೇಳಿದ್ದೇನು? Commissioner of Police Dr.P.S Harsha](https://etvbharatimages.akamaized.net/etvbharat/prod-images/768-512-5773744-thumbnail-3x2-net-2.jpg)
ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ
ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ
ಈ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ, ಇಲಾಖೆಯು ಭದ್ರತಾ ಕಾರ್ಯಗಳನ್ನು ಸಂಪೂರ್ಣ ನಿರ್ವಹಿಸಿದೆ. ಪರಿಸ್ಥಿತಿ ಈಗ ಶಾಂತವಾಗಿದ್ದು, ಹತೋಟಿಯಲ್ಲಿದೆ ಎಂದರು.
ದೊರೆತಿರುವ ಬ್ಯಾಗ್ಅನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿದ್ದು, ಸದ್ಯ ಐಸೋಲೇಷನ್ ಬೇ ಪ್ರಕಾರ ಬ್ಯಾಗ್ ನಿರ್ವಹಣೆ ಮಾಡುವ ಕೆಲಸ ನಡೆಸಲಾಗಿದೆ. ಎಲ್ಲಾ ನಾಗರಿಕರನ್ನು ಬ್ಯಾಗ್ ದೊರಕಿರುವ ಸ್ಥಳದಿಂದ ದೂರ ಇರುವ ಹಾಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
TAGGED:
ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ