ಪುತ್ತೂರು :ಖಾಸಗಿ ನರ್ಸಿಂಗ್ ಹೋಂಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐಎಂಎ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ದೂರು ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂಧೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಈ ಮುನ್ನ ಹೇಳಿಕೆ ನೀಡಿದ್ದರು.
ವಿವಾದಾತ್ಮಕ ಹೇಳಿಕೆ : ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ದೂರು ದಾಖಲು - ಪುತ್ತೂರು ನಗರ ಪೊಲೀಸ್ ಠಾಣೆ
ಖಾಸಗಿ ನರ್ಸಿಂಗ್ ಹೋಂಗಳು ಸುಲಿಗೆ ನಡೆಸುವುದನ್ನು ನಿಲ್ಲಿಸದಿದ್ದರೆ ಜನರನ್ನು ಕಳಿಸಿ ಹೊಡೆಸುತ್ತೇವೆ ಎಂದು ಹೇಳಿದ್ದ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದಿತ್ತು..
ಓದಿ: 3ನೇ ಅಲೆ ಎದುರಿಸುವುದು ಅನಿವಾರ್ಯ... 6-8 ವಾರಗಳಲ್ಲಿ ಅಪ್ಪಳಿಸಬಹುದು: ಏಮ್ಸ್ ಮುಖ್ಯಸ್ಥ
ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಂಕಷ್ಟದ ಕಾಲದಲ್ಲಿ ಜನರ ಸುಲಿಗೆ ಮಾಡುತ್ತಿವೆ ಎಂದು ಕೆಲವು ದಿನಗಳ ಹಿಂದೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿಕೆ ನೀಡಿದ್ದರು. ಖಾಸಗಿ ನರ್ಸಿಂಗ್ ಹೋಂಗಳು ಸುಲಿಗೆ ನಡೆಸುವುದನ್ನು ನಿಲ್ಲಿಸದಿದ್ದರೆ ಜನರನ್ನು ಕಳಿಸಿ ಹೊಡೆಸುತ್ತೇವೆ ಎಂದು ಹೇಳಿದ್ದ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದಿತ್ತು. ಈ ಬೆನ್ನಲ್ಲೇ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.