ಮಂಗಳೂರು:ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 4ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾ ವಾಹಿನಿಯಿಂದ ಆಯೋಜಿಸಲಾಗಿದ್ದ ಬೃಹತ್ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಅವರು ದ್ವೇಷಪೂರಿತ ಭಾಷಣ ಮಾಡಿದ್ದಾರೆ. ಈ ಭಾಷಣದ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಸಂಘಟಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.