ಕರ್ನಾಟಕ

karnataka

ETV Bharat / state

ಕರಾವಳಿಯ 2 ವಿಧಾನಪರಿಷತ್ ಸ್ಥಾನಕ್ಕೆ ಕಾಂಗ್ರೆಸ್​​ನಿಂದ ಅರ್ಜಿ ಸಲ್ಲಿಕೆ ಆರಂಭ - ಕಾಂಗ್ರೆಸ್​​​ನ ಪ್ರತಾಪ್ ಚಂದ್ರ ಶೆಟ್ಟಿ

ಎರಡು ಪರಿಷತ್ ಸ್ಥಾನದ ಅವಧಿ ಮುಕ್ತಾಯವಾಗುತ್ತಿದ್ದು, ಮಂಗಳೂರಲ್ಲಿ ರಾಜಕೀಯ ಚಟುವಟಿಕೆ ಚುರುಕು ಪಡೆದುಕೊಂಡಿದೆ. ಕಾಂಗ್ರೆಸ್​ನಿಂದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ.

congress-begins-filing-application-for-the-council-election
ಕರಾವಳಿಯ 2 ವಿಧಾನಪರಿಷತ್ ಸ್ಥಾನಕ್ಕೆ ಕಾಂಗ್ರೆಸ್​​ನಿಂದ ಅರ್ಜಿ ಸಲ್ಲಿಕೆ ಆರಂಭ

By

Published : Sep 22, 2021, 2:30 PM IST

ಮಂಗಳೂರು ನಗರದಲ್ಲಿ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಕೆಲವೇ ತಿಂಗಳಲ್ಲಿ ಎರಡು ಪರಿಷತ್ ಸ್ಥಾನಗಳಿಗೆ ಚುನಾವಣೆಗೆ ಘೋಷಣೆಯಾಗಲಿದ್ದು, ಕಾಂಗ್ರೆಸ್​​​ನಲ್ಲಿ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಕರಾವಳಿಯ 2 ವಿಧಾನಪರಿಷತ್ ಸ್ಥಾನಕ್ಕೆ ಕಾಂಗ್ರೆಸ್​​ನಿಂದ ಅರ್ಜಿ ಸಲ್ಲಿಕೆ ಆರಂಭ

ಹಾಲಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್​​​ನ ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಬಿಜೆಪಿಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಸದಸ್ಯತ್ವದ ಅವಧಿ ಮುಗಿಯಲಿದ್ದು, ನೂತನ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾಗದಿದ್ದರೂ ಕಾಂಗ್ರೆಸ್​​ನಲ್ಲಿ ಈಗಾಗಲೇ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕಾಂಗ್ರೆಸ್​​ನಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೆಪ್ಟೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈಗಾಗಲೇ ಮಂಜುನಾಥ ಭಂಡಾರಿ, ಶಶಿಧರ್ ಹೆಗ್ಡೆ ಮತ್ತು ಪ್ರಸಾದ್ ರಾಜ್ ಕಾಂಚನ್ ಅರ್ಜಿ ಸಲ್ಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ ತಿಳಿಸಿದ್ದಾರೆ.

ಅರ್ಜಿದಾರರಿಂದ 1 ಲಕ್ಷ ರೂ. ನಿಧಿ ಸಂಗ್ರಹ

ಕೆಪಿಸಿಸಿ ಸೂಚನೆಯಂತೆ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಟ್ಟಡ ನಿಧಿಗೆ 1 ಲಕ್ಷ ರೂ. ಕೊಡುಗೆ ನೀಡುವಂತೆ ಸೂಚಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಮೂವರು ಕೆಪಿಸಿಸಿ ಕಟ್ಟಡ ನಿಧಿಗೆ 1 ಲಕ್ಷ ರೂ. ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಾರಿ ಪ್ರತಾಪ್ ಚಂದ್ರ ಶೆಟ್ಟಿ ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿರುವುದರಿಂದ ಕಾಂಗ್ರೆಸ್​ ಇದೇ ತಿಂಗಳ ಕೊನೆಯವರೆಗೆ ಬರುವ ಅರ್ಜಿಯನ್ನು ಪರಿಗಣಿಸಿ ಅಭ್ಯರ್ಥಿ ಘೋಷಣೆ ಮಾಡಲಿದೆ ಎಂದು ಹೇಳಲಾಗ್ತಿದೆ. ಬಿಜೆಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತೊಮ್ಮೆ ಚುನಾವಣೆಗೆ ನಿಲ್ಲುವ ಸಾಧ್ಯತೆ ಇದ್ದು, ಮತ್ತೋರ್ವ ಅಭ್ಯರ್ಥಿಯನ್ನು ಪಕ್ಷ ಘೋಷಿಸಲಿದೆ. ಒಟ್ಟಿನಲ್ಲಿ ಚುನಾವಣೆಗೆ ಅಧಿಸೂಚನೆ ಪ್ರಕಟವಾಗದಿದ್ದರೂ ಪರಿಷತ್ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ಮಾಡಿಕೊಳ್ಳಲಾಗ್ತಿದೆ.

ಇದನ್ನೂ ಓದಿ:ವಿಚಿತ್ರವಾದರೂ ಅನಿವಾರ್ಯ.. ಮುಡಿ ತೆಗೆಸಿಕೊಂಡು ಬಂದ್ರೆ ಮಾದಪ್ಪನ ದರ್ಶನವಿಲ್ಲ

ABOUT THE AUTHOR

...view details