ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು 'ದೇಶದ್ರೋಹಿ' ಎಂದು ಕರೆದಿರುವುದನ್ನು ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ನಾಯಕರು ಮಂಗಳೂರು ಪೊಲೀಸ್ ಕಮೀಷನರ್‌ಗೆ ದೂರು ನೀಡಿದ್ದಾರೆ.
'ಸಸಿಕಾಂತ್ ದೇಶದ್ರೋಹಿ' ಎಂದ ಬಿಜೆಪಿಯ ಮಠಂದೂರು; ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು - police commissioner
ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು 'ದೇಶದ್ರೋಹಿ' ಎಂದು ಕರೆದಿರುವುದನ್ನು ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ನಾಯಕರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಸಸಿಕಾಂತ್ ದೇಶದ್ರೋಹಿ ಎಂದ ಬಿಜೆಪಿ ಅಧ್ಯಕ್ಷರ ವಿರುದ್ಧ ಪೊಲೀಸ್ ಕಮೀಷನರ್‌ಗೆ ಕಾಂಗ್ರೆಸ್ ದೂರು
ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಗೆ ತೆರಳಿದ ನಿಯೋಗ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಿರುದ್ಧ ದೂರು ನೀಡಿದ್ರು.
ಸರ್ಕಾರದ ನಿಲುವನ್ನು ವಿರೋಧಿಸಿದ ಕೂಡಲೇ ಅವರನ್ನು 'ದೇಶದ್ರೋಹಿ' ಎಂದು ಕರೆಯುವುದು ಖಂಡನೀಯ. ಹಾಗಾಗಿ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ರ.