ಕರ್ನಾಟಕ

karnataka

ETV Bharat / state

ಡಿಕೆಶಿ‌ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ.. ಕೈ ಮುಖಂಡ ಮಿಥುನ್ ರೈ ಪೊಲೀಸರ ವಶಕ್ಕೆ - CBI raid

ಪ್ರತಿಭಟನಾಕಾರರು ಏಕಾಏಕಿ ರಸ್ತೆ ಮಧ್ಯೆ ಟೈರ್​​​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಇದನ್ನು ತಡೆಯಲೆತ್ನಿಸಿದಾಗ ಪ್ರತಿಭಟನಾಕಾರರು ರಸ್ತೆ ಮಧ್ಯೆಯೇ ಕುಳಿತು ಘೋಷಣೆ ಕೂಗಿದರು..

congress-leader-mithun-rai-detained-by-police
ಡಿಕೆಶಿ‌ ಮೇಲೆ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ

By

Published : Oct 5, 2020, 3:02 PM IST

ಮಂಗಳೂರು (ದ.ಕ) :ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಖಂಡಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಕಾಂಗ್ರೆಸ್ ಕಚೇರಿಯ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಈ ಸಂದರ್ಭ ಪೊಲೀಸರು ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್​​​​ ಮುಖಂಡ ಮಿಥುನ್ ರೈ ಪೊಲೀಸರ ವಶಕ್ಕೆ

ಪ್ರತಿಭಟನಾಕಾರರು ಏಕಾಏಕಿ ರಸ್ತೆ ಮಧ್ಯೆ ಟೈರ್​​​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಇದನ್ನು ತಡೆಯಲೆತ್ನಿಸಿದಾಗ ಪ್ರತಿಭಟನಾಕಾರರು ರಸ್ತೆ ಮಧ್ಯೆಯೇ ಕುಳಿತು ಘೋಷಣೆ ಕೂಗಿದರು.

ಈ ಸಂದರ್ಭ ಪೊಲೀಸರು ಪ್ರತಿಭಟನೆಯ ನೇತೃತ್ವ ವಹಿಸಿದ ಮಿಥುನ್ ರೈ ಅವರನ್ನು ವಶಕ್ಕೆ ಪಡೆದು ವಾಹನಕ್ಕೆ ಹತ್ತಿಸಿದ ಕೂಡಲೇ ಆಕ್ರೋಶಿತರಾದ ಪ್ರತಿಭಟನಾಕಾರರು ಪೊಲೀಸ್ ವಾಹನ ತಡೆಯಲೆತ್ನಿಸಿದರು. ಬಳಿಕ ಕಾಂಗ್ರೆಸ್ ಮುಖಂಡರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಣ್ಣಗಾಯಿತು.‌

ABOUT THE AUTHOR

...view details