ಮಂಗಳೂರು:ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿದ ದ.ಕನ್ನಡ ಜಿಲ್ಲಾ'ಕೈ' ನಾಯಕರಿಬ್ಬರು ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆ.
ದ.ಕನ್ನಡ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಮಿಥುನ್ ರೈ ಹಾಗೂ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಕ್ವಾರಂಟೈನ್ ನಿಯಮ ಮೀರಿ ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 'ಕೈ' ನಾಯಕರು ಜು.31ರಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ದ.ಕ.ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅವರೊಂದಿಗೆ ಈ ಇಬ್ಬರೂ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ವೇದಿಕೆ ಹಂಚಿಕೊಂಡಿದ್ದರು. ಅದೇ ವೇದಿಕೆಯಲ್ಲಿದ್ದ ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರು ಅಂದು ಸಂಜೆ ತಮ್ಮ ಗಂಟಲು ದ್ರವದ ಮಾದರಿಯನ್ನು ತಪಾಸಣೆ ಮಾಡಿದ್ದರು. ಮರುದಿನ ಸೋಂಕು ದೃಢಗೊಂಡಿರುವ ಬಗ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದರು.
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 'ಕೈ' ನಾಯಕರು ಈ ಬಗ್ಗೆ ಜಿಲ್ಲಾಡಳಿತ ಅಂದು ಐವನ್ ಡಿಸೋಜ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಪತ್ರಕರ್ತರ ಸಹಿತ ಎಲ್ಲಾ ಕಾಂಗ್ರೆಸ್ ನಾಯಕರು ಹಾಗೂ ಮತ್ತಿತರರಿಗೆ ಕ್ವಾರಂಟೈನ್ಗೆ ಒಳಗಾಗಬೇಕೆಂದು ಸೂಚನೆ ನೀಡಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಯವರು ಹೆಚ್ಚಿನ ಪತ್ರಕರ್ತರಿಗೂ ಕರೆಮಾಡಿ ಕ್ವಾರಂಟೈನ್ಗೆ ಒಳಗಾಗಿರುವ ಬಗ್ಗೆ ಮಾಹಿತಿ ಕಲೆ ಹಾಕಿತ್ತು. ಆದರೆ ಆರೋಗ್ಯ ಇಲಾಖೆಗೆ ಶಾಲೆಟ್ ಪಿಂಟೊ ಹಾಗೂ ಮಿಥುನ್ ರೈ ವೇದಿಕೆಯಲ್ಲಿದ್ದು, ಇಂದು ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ತಿಳಿದಿಲ್ಲವೇ?. ಅಥವಾ ಗೊತ್ತಿದ್ದೂ ಸುಮ್ಮನೆ ಕುಳಿತಿದೆಯೇ?. ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ಈ ಇಬ್ಬರು 'ಕೈ' ನಾಯಕರ ಮೇಲೆ ಕ್ರಮಕೈಗೊಳ್ಳಬೇಕಾಗಿದೆ.