ಮಂಗಳೂರು:ವಿದ್ಯುತ್ ಬಿಲ್ ಕೇಳಲು ಹೋದ ಇಬ್ಬರು ಮೆಸ್ಕಾಂ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡನೋರ್ವ ಹಲ್ಲೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡ ಅಮೀರ್ ತುಂಬೆ ಎಂಬಾತ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಪಾವತಿಯಾಗದ ವಿದ್ಯುತ್ ಬಿಲ್ ಬಗ್ಗೆ ಮಾಹಿತಿ ಪಡೆಯಲು ಬಂದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ವಿದ್ಯುತ್ ಬಿಲ್ ಕೇಳಲು ಬಂದ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಇತ್ತೀಚೆಗೆ ಸಿಎಎ, ಎನ್ಆರ್ಸಿ ಕಾಯ್ದೆಯ ನೆಪವೊಡ್ಡಿ ಸರ್ಕಾರಿ ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಉಳ್ಳಾಲ ವ್ಯಪ್ತಿಯಲ್ಲಿ ಮಾಹಿತಿ ನೀಡುತ್ತಿಲ್ಲ ಎಂಬ ಮಾತಿದೆ. ಈ ಪ್ರಕರಣವೂ ಸಿಎಎ, ಎನ್ಆರ್ಸಿ ಕಾಯ್ದೆಯ ನೆಪವೊಡ್ಡಿ ಸರ್ಕಾರಿ ನೌಕರರಿಗೆ ಬೆದರಿಕೆ ಹುಟ್ಟಿಸುವ ಕೃತ್ಯ ನಡೆಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಈ ಬಗ್ಗೆ ಮೆಸ್ಕಾಂ ಸಿಬ್ಬಂದಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಕಾರಿ ನೌಕರರ ಮೇಲೆ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.