ಕರ್ನಾಟಕ

karnataka

ETV Bharat / state

ಡಿ.ಕೆ.ಶಿವಕುಮಾರ್ ಪದಗ್ರಹಣ ವೀಕ್ಷಣೆಗೆ ಬಂಟ್ವಾಳದಲ್ಲಿ ಸಿದ್ಧತೆ

ಜೂ. 7ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್​​ ಪದಗ್ರಹಣ ಕಾರ್ಯಕ್ರಮದ ನೇರ ಪ್ರಸಾರವನ್ನು ಪ್ರತಿ ಗ್ರಾಮ ಪಂಚಾಯತ್​ ಮತ್ತು ಪುರಸಭಾ ವಾರ್ಡ್ ವ್ಯಾಪ್ತಿಯಲ್ಲಿ ಟಿವಿಗಳ ಮೂಲಕ ಮತ್ತು ಆ್ಯಪ್​​ ಮೂಲಕ ಲೈವ್ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

Bantvala news
Bantvala news

By

Published : Jun 1, 2020, 5:25 PM IST

ಬಂಟ್ವಾಳ:ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ರಮಾನಾಥ ರೈ, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲು ಸಜ್ಜಾಗಿದ್ದಾರೆ. ಜೂನ್ 7ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.ಕೊರೊನಾ ಹಿನ್ನೆಲೆಯಲ್ಲಿ ಪದಗ್ರಹಣ ಸಮಾರಂಭಕ್ಕೆ ಹೋಗಲು ಸಾಧ್ಯವಿಲ್ಲ. ಹಾಗಾಗಿ ಪ್ರತಿ ಗ್ರಾಮ ಪಂಚಾಯತ್​ ಮತ್ತು ಪುರಸಭಾ ವಾರ್ಡ್ ವ್ಯಾಪ್ತಿಯಲ್ಲಿ ಟಿವಿಗಳ ಮೂಲಕ ಮತ್ತು ಆ್ಯಪ್​ ಮೂಲಕ ಲೈವ್ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಡಿಕೆಶಿ ಪದಗ್ರಹಣ ವೀಕ್ಷಣೆಗೆ ಸಿದ್ಧತೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ 27 ವಾರ್ಡ್​ಗಳು, ಬಂಟ್ವಾಳ ಕಸಬಾಗೆ ಸಂಬಂಧಿಸಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿ, ಬಿ.ಮೂಡ ಗ್ರಾಮಕ್ಕೆ ಸಂಬಂಧಿಸಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿ, ಪಾಣೆಮಂಗಳೂರು ಕಸಬಾಗೆ ಸಂಬಂಧಿಸಿ ಮೇಲ್ಕಾರಿನ ಬಿರ್ವ ಸೆಂಟರ್​ನಲ್ಲಿ ನೇರಪ್ರಸಾರ ನಡೆಯಲಿದೆ ಎಂದರು.

ಇದೇ ವೇಳೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಿಸಿದ ಗೂಡಿನಬಳಿ ಯುವಕರನ್ನು ಸನ್ಮಾನಿಸಲಾಯಿತು.

ABOUT THE AUTHOR

...view details