ಮಂಗಳೂರು :ಸಿದ್ದರಾಮಯ್ಯ ಸರ್ಕಾರ ಇದ್ದಾಗ 24 ಮಂದಿ ಕಾರ್ಯಕರ್ತರ ಹತ್ಯೆಯಾಗಿತ್ತು. ಆವಾಗ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಬೇಕಾಗಿತ್ತು. ಹಗರಣವೊಂದರಲ್ಲಿ ಬೇಲ್ ಪಡೆದಿರುವ ಕಾಂಗ್ರೆಸ್ ಅಧ್ಯಕ್ಷರು ಕೂಡ ಜೈಲಿನಲ್ಲಿ ಇರಬೇಕಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಮೇಲೆ ಹತ್ತು ಕೇಸ್ಗಳಿದ್ದು, ಆತನನ್ನು ಕೂಡ ನೀವು ಜೈಲಿಗೆ ಹಾಕಬೇಕು. ಕಾಂಗ್ರೆಸ್ನವರು ಜೈಲಿನ ಒಳಗಡೆ ಹೋರಾಟ ಮಾಡಬೇಕು ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ನವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.