ಮಂಗಳೂರು :ನಗರದಲ್ಲಿ ಮುಂಗಾರು ಚುರುಕುಗೊಂಡಿದೆ. ನಿನ್ನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಶನಿವಾರ ಸಂಜೆ ಜೋರಾಗಿ ಗಾಳಿಯಿಂದ ಕೂಡಿದ ಮಳೆ ಸುರಿದಿದೆ. ರಾತ್ರಿ ಯೂ ಮಳೆಯಾಗಿದೆ. ನಿರಂತರವಾಗಿ ಅಬ್ಬರದಿಂದ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಣ್ಣಪುಟ್ಟ ತೊಂದರೆಯಾಗಿದೆ. ಅಲ್ಲದೆ ಕೆಲವೆಡೆ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.
ಮಳೆಯ ಬಿರುಸು ಹೆಚ್ಚಾಗಿರುವುದರಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾಸರಗೋಡು ಸೇರಿ ಕರ್ನಾಟಕದ ಕರಾವಳಿ ಭಾಗಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.