ಕರ್ನಾಟಕ

karnataka

ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

By

Published : Oct 15, 2019, 11:16 AM IST

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಸೂಚಿಸಿದ್ದಾರೆ.

ತಂಬಾಕು ನಿಯಂತ್ರಣ ಕೋಶದ ಸಭೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಮಾತಾನಾಡಿದ ಅವರು, ತಂಬಾಕು ವ್ಯಸನ ತಡೆಗಟ್ಟಲು ಶಾಲಾ-ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿಗಳ ಮೂಲಕ ಪರಿಣಾಮಕಾರಿಯಾದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ತಂಬಾಕು ವ್ಯಸನಕ್ಕೆ ಯುವ ಜನರು ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಈಗಾಗಲೇ ಹಲವಾರು ಶಾಲೆಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಅರಿವು ಕಾರ್ಯಕ್ರಮಗಳು ನಡೆದಿವೆ. ಅದರಲ್ಲಿ ಹಲವು ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಗುರುತಿಸಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details