ಕರ್ನಾಟಕ

karnataka

ETV Bharat / state

ವಿವಾದಾತ್ಮಕ ಹೇಳಿಕೆ: ಕೋಟಿ ಚೆನ್ನಯ್ಯರ ಗರಡಿಯಲ್ಲಿ ಜಗದೀಶ್ ಅಧಿಕಾರಿ ಕ್ಷಮೆಯಾಚನೆ ! - Jagdish Adhikari

ಕೋಟಿ ಚೆನ್ನಯ್ಯ ಹಾಗೂ ಬಿಲ್ಲವ ಸಮಾಜದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಜಗದೀಶ್‌ ಅಧಿಕಾರಿ ಅವರು ಮಂಗಳವಾರ ಕೆಲ್ಲಪುತ್ತಿಗೆಯ ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ ಕ್ಷಮೆ ಯಾಚಿಸಿದರು.

controversial-statement-jagdish-adhikari-apologizes-to-god-in-putturu
ಜಗದೀಶ್ ಅಧಿಕಾರಿ ಕ್ಷಮೆಯಾಚನೆ

By

Published : Feb 11, 2021, 11:02 PM IST

ಪುತ್ತೂರು: ತನ್ನ ಹೇಳಿಕೆಯಿಂದ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರು ಕೋಟಿ-ಚೆನ್ನಯ್ಯರ ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚಿಸಿದ್ದಾರೆ.

ಜಗದೀಶ್ ಅಧಿಕಾರಿ ಕ್ಷಮೆಯಾಚನೆ

ತಾಲೂಕಿನ ಪಡುಮಲೆಯಲ್ಲಿರುವ ಕೋಟಿ ಚೆನ್ನಯ್ಯರ ಮೂಲಕ್ಷೇತ್ರದಲ್ಲಿ ದೇಯಿ ಬೈದೆತಿ ಅವರ ಸಮಾಧಿ ಸ್ಥಳದಲ್ಲಿ ಕೈ ಕಾಣಿಕೆ ಒಪ್ಪಿಸಿ, ಕುವೆತೋಟದಲ್ಲಿ ಸುವರ್ಣಕೇದಗೆ ದೇಯಿ ಬೈದೆತಿಗೆ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ತನ್ನ ಹೇಳಿಕೆಯಿಂದ ಬಿಲ್ಲವ ಸಮುದಾಯಕ್ಕೆ ನೋವಾಗಿದೆ. ಈ ಹಿನ್ನೆಲೆಯಲ್ಲಿ ತಾನು ಪಡುಮಲೆಯ ಮೂಲಕ್ಷೇತ್ರಕ್ಕೆ ಬಂದು ಕ್ಷಮೆಯಾಚನೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಓದಿ:ಸವದತ್ತಿ ಯಲ್ಲಮ್ಮ ದೇವಸ್ಥಾನ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣ: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್​

ಕಾರಣಿಕ ಪುರುಷರಾದ ಅವಳಿ ವೀರರು ನನಗೆ ಕ್ಷಮೆ ಕರುಣಿಸಬೇಕು. ವೀರಪುರುಷರ ವಿಚಾರದಲ್ಲಿ ನನ್ನ ಮಾತಿನಲ್ಲಿ ತಪ್ಪಾಗಿದೆ ಎಂಬುವುದು ನನಗೆ ಅರಿವಾಗಿದೆ. ತನ್ನ ತಪ್ಪನ್ನು ಮನ್ನಿಸುವಂತಹ ಅನುಗ್ರಹವನ್ನು ಕರುಣಿಸಬೇಕೆಂದು ಕೇಳಿಕೊಂಡಿದ್ದಾರೆ.

ABOUT THE AUTHOR

...view details