ಮಂಗಳೂರು:ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಉಗ್ರ ಶಾರಿಕ್ ನನ್ನು ಬೆಂಗಳೂರು ಆಸ್ಪತ್ರೆಗೆ ಶನಿವಾರ ಶಿಫ್ಟ್ ಮಾಡಲಾಗಿದೆ.
ಆರೋಪಿ ಶಾರಿಕ್ ಗೆ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆ ವೈದ್ಯರ ಸಲಹೆಯಂತೆ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಶನಿವಾರ ಬೆಳಗ್ಗೆ 6 ಗಂಟೆಗೆ ಬಿಗಿ ಭದ್ರತೆಯಲ್ಲಿ ಆತನನ್ನು ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ದೃಢಪಡಿಸಿದ್ದಾರೆ.