ಬಂಟ್ವಾಳ: ಸಿಲಿಂಡರ್ ಅನಿಲ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಭಷ್ಮವಾಗಿದ್ದು, ಪವಾಡ ಸದೃಶ್ಯ ರೀತಿಯಲ್ಲಿ ಮನೆಮಂದಿ ಪಾರಾಗಿದ್ದಾರೆ.
ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅನಾಹುತ : ಪವಾಡ ಸದೃಶ ರೀತಿಯಲ್ಲಿ ಪಾರಾದ ಮನೆಮಂದಿ - ಅಡುಗೆ ಸಿಲಿಂಡರ್ ಅನಿಲ
ವಿಟ್ಲ ಕಸಬಾ ಗ್ರಾಮದ ಉಕ್ಕುಡ ದರ್ಬೆಯಲ್ಲಿನ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ. ಪರಿಣಾಮ ಮನೆಯಲ್ಲಿನ ಕೆಲ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಅಡುಗೆ ಅನಿಲ ಸೋರಿಕೆ
ವಿಟ್ಲ ಕಸಬಾ ಗ್ರಾಮದ ಉಕ್ಕುಡ ದರ್ಬೆಯಲ್ಲಿನ ಯೂಸುಪ್ ಎಂಬುವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಸ್ಟವ್ ಅಳವಡಿಕೆ ಮಾಡಲು ಗ್ಯಾಸ್ನ ಮುಚ್ಚಳ ತೆಗೆದಾಗ ಅನಿಲ ಸೋರಿಕೆಯಾಗಿದೆ. ಬಳಿಕ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯಿಂದ ಮನೆಯ ವಿದ್ಯುತ್ ಸಂಪರ್ಕ ಹಾಗೂ ಇತರೆ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.