ಮಂಗಳೂರು:ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಶುಕ್ರವಾರ 21 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈವರೆಗೆ 356 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 344 ನೆಗೆಟಿವ್ ಬಂದಿದೆ. ಹೋಮ್ ಕ್ವಾರಂಟೈನ್ನಲ್ಲಿ 2,945 ಮಂದಿ ಇದ್ದು, 15 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 21 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - ದಕ್ಷಿಣ ಕನ್ನಡ ಜಿಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್- 19 ರ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಆದ್ರೆ ಸೋಂಕಿನ ಭೀತಿ ಹಿನ್ನೆಲೆ ಇಂದು 21 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಕೋವಿಡ್ 19
ಇಂದಿಗೆ 2,979 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ, 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.