ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 4 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 628 ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 172 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 28,131 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 212 ಮಂದಿ ಗುಣಮುಖರಾಗಿದ್ದು, ಈವರೆಗೆ 24016 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3487 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 221071 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 192940 ನೆಗೆಟಿವ್ ಬಂದಿದೆ. ಈವರೆಗೆ 8104 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ರೂ 945875 ದಂಡ ವಸೂಲಿ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆ:
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 106 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 18.220 ಕ್ಕೆ ಏರಿಕೆಯಾಗಿದೆ. ಇಂದು 365 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 16.901 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 01 ಸಾವು ಸಂಭವಿಸಿದೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 330 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,004 ಜನ ಚಿಕಿತ್ಸೆಯಲ್ಲಿದ್ದಾರೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 119 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 19 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 125 ಜನ ಇದ್ದಾರೆ. ಮನೆಯಲ್ಲಿ 722 ಜನ ಐಸೋಲೇಷನ್ ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 19 ಸೋಂಕಿತರಿದ್ದಾರೆ.
ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 7,045 ಏರಿಕೆ ಹಾಗಿದೆ. ಇದರಲ್ಲಿ 4,796 ಝೋನ್ ವಿಸ್ತರಣೆಯಾಗಿದೆ.
ತಾಲೂಕುವಾರು ಸೋಂಕಿತರ ಸಂಖ್ಯೆ:
ಶಿವಮೊಗ್ಗ-36
ಭದ್ರಾವತಿ-28