ಮಂಗಳೂರು:ನಗರದಲ್ಲಿ ನರ್ಸಿಂಗ್ ಕಾಲೇಜುಗಳ ನಿರ್ಲಕ್ಷ್ಯದಿಂದಾಗಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು ನಗರದಲ್ಲಿ ಆತಂಕ ಸೃಷ್ಟಿಸಿದೆ.
ಒಂದೇ ಆಡಳಿತ ವ್ಯವಸ್ಥೆಗೆ ಒಳಪಟ್ಟ ನಗರದ ಸಿಟಿ ನರ್ಸಿಂಗ್ ಕಾಲೇಜು ಹಾಗೂ ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜುಗಳಲ್ಲಿಯೇ ಬರೋಬ್ಬರಿ 78 ಮಂದಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅದೇ ರೀತಿ ಮಸೂದ್ ನರ್ಸಿಂಗ್ ಕಾಲೇಜಿನಲ್ಲಿ ಆರು ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ.