ಮಂಗಳೂರು:ಮಹಾರಾಷ್ಟ್ರದ ಮುಂಬೈನಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಆಗಮಿಸಿದ್ದ ಮಹಿಳೆಗೆ ಕೊರೊನಾ ಇರುವುದು ದೃಢಪಟ್ಟಿದೆ.
ಮುಂಬೈನಿಂದ ದಕ್ಷಿಣ ಕನ್ನಡಕ್ಕೆ ಬಂದ ಮಹಿಳೆಯಲ್ಲಿ ಕೊರೊನಾ ದೃಢ
ಇದೇ ತಿಂಗಳು 18ರಂದು ಮುಂಬೈನಿಂದ ಮಂಗಳೂರಿಗೆ ಆಗಮಿಸಿದ್ದ ಮಹಿಳೆಯೊಬ್ಬಳಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ದಕ್ಷಿಣ ಕನ್ನಡ
ಬೆಳ್ತಂಗಡಿ ತಾಲೂಕಿನ 29 ವರ್ಷದ ಈ ಮಹಿಳೆ ಮೇ 18 ರಂದು ಥಾಣೆಯ ಡೊಂಬಿವಿಲಿಯಿಂದ ಮಂಗಳೂರಿಗೆ ಆಗಮಿಸಿದ್ದರು. ಇವರನ್ನು ಬೆಳ್ತಂಗಡಿಯ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಇವರ ಗಂಟಲು ದ್ರವ ಪರೀಕ್ಷಿಸಿದ್ದು, ಇಂದು ಮಹಿಳೆಗೆ ಕೊರೊನಾ ಇರುವುದು ವರದಿಯಲ್ಲಿ ದೃಢಪಟ್ಟಿದೆ.
ಸದ್ಯ ಈ ಮಹಿಳಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಕೋವಿಡ್ ವಾರ್ಡ್ಗೆ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 62 ಪ್ರಕರಣಗಳು ಈವರೆಗೆ ದೃಢಪಟ್ಟಿದ್ದು, ಇದರಲ್ಲಿ 21 ಮಂದಿ ಗುಣಮುಖರಾಗಿದ್ದಾರೆ. ಐವರು ಸಾವನ್ನಪ್ಪಿದ್ದು, 36 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.