ಕರ್ನಾಟಕ

karnataka

ETV Bharat / state

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿದ್ದ ವಿಚಾರಣಾಧೀನ ಕೈದಿಗೆ ಕೊರೊನಾ ದೃಢ!

ನಗರದ ಸಬ್ ಜೈಲಿನಲ್ಲಿದ್ದ ಈ ವಿಚಾರಣಾಧೀನ ಕೈದಿ ಮನೋರೋಗದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ವೆನ್​ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಆರೋಗ್ಯದಲ್ಲಿ ವ್ಯತ್ಯಾಸಗೊಂಡ ಹಿನ್ನೆಲೆಯಲ್ಲಿ ಆತನ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ರವಾನಿಸಲಾಗಿತ್ತು.

wenlock hospital mangalore
ಮಂಗಳೂರಿನ ವೆನ್ಲಾಕ್ ಆಸ್ಪತ್ರೆ

By

Published : Jun 30, 2020, 5:30 AM IST

ಮಂಗಳೂರು:ನಗರದ ವೆನ್​ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ವಿಚಾರಣಾಧೀನ‌ ಕೈದಿಗೆ ಕೊರೊನಾ ಸೋಂಕು ದೃಢಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ನಗರದ ಸಬ್ ಜೈಲಿನಲ್ಲಿದ್ದ ಈ ವಿಚಾರಣಾಧೀನ ಕೈದಿ ಮನೋರೋಗದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ವೆನ್​ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಆರೋಗ್ಯದಲ್ಲಿ ವ್ಯತ್ಯಾಸಗೊಂಡ ಹಿನ್ನೆಲೆಯಲ್ಲಿ ಆತನ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ರವಾನಿಸಲಾಗಿತ್ತು.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆ

ಇದೀಗ ಆತನ ವರದಿ ಬಂದಿದ್ದು, ಆತನಿಗೆ ಸೋಂಕು ದೃಢಗೊಂಡಿದೆ. ಈ ವಿಚಾರಣಾಧೀನ ಕೈದಿಗೆ ಆಸ್ಪತ್ರೆಯ ಆರೋಗ್ಯ ಸಿಬ್ಬಂದಿಯಿಂದ ಸೋಂಕು ‌ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೀಗ ಆತನನ್ನು ಪ್ರತ್ಯೇಕವಾಗಿ ಕ್ವಾರೆಂಟೈನ್ ಇಡಲಾಗಿದೆ.

ABOUT THE AUTHOR

...view details