ಕರ್ನಾಟಕ

karnataka

ETV Bharat / state

ಬೆಳ್ತಂಗಡಿಯಲ್ಲಿ ಕೊರೊನಾ ತಡೆಗೆ ಕಠಿಣ ಕ್ರಮ.. ಮಂಗಳೂರಲ್ಲಿ ಓರ್ವನ ಬಂಧನ - ಕರ್ನಾಟಕದಲ್ಲಿ ಕೊರೊನಾ ಕರ್ಫ್ಯೂ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಕ್ಕೆ ಮತ್ತಷ್ಟು ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ. ಅನಗತ್ಯವಾಗಿ ಬೈಕ್‌ನಲ್ಲಿ ತಿರುಗಾಡುತ್ತಿದ್ದವರ ಕೆಲವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ಬಳಿಕ ಬಂದ ಪ್ರತಿಯೊಂದು ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿ ಕಳುಹಿಸುತ್ತಿದ್ದಾರೆ. ನಿಯಮ ಉಲ್ಲಂಘಿಸಿದ ಆರೋಪಡದಿ ಮಂಗಳೂರಲ್ಲಿ ಓರ್ವನನ್ನು ಬಂಧಿಸಲಾಗಿದೆ.

Corona curfew in Beltangadi
ಬೆಳ್ತಂಗಡಿಯಲ್ಲಿ ಕೊರೊನಾ ವೈರಸ್ ನ್ಯೂಸ್

By

Published : May 8, 2021, 7:49 AM IST

Updated : May 8, 2021, 8:34 AM IST

ಬೆಳ್ತಂಗಡಿ/ಮಂಗಳೂರು:ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸದೆ ಅನಗತ್ಯವಾಗಿ ವಾಹನದಲ್ಲಿ ಓಡಾಡುತ್ತಿದ್ದ ಬೈಕ್ ಸವಾರನೋರ್ವನನ್ನು ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಆರೋಪದಲ್ಲಿ ಬಜ್ಪೆ ಠಾಣಾ ಪೊಲೀಸರು ಇಂದು ಬಂಧಿಸಿದ್ದಾರೆ.

ಬಡಗಗುಳಿಪಾಡಿ ಗ್ರಾಮದ ಸೂರಲ್ಪಾಡಿ ನಿವಾಸಿ ಅಬ್ದುಲ್ ಹಾಲಿಕ್(24) ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪಿ. ಈತ ಮಾಸ್ಕ್, ಹೆಲ್ಮೆಟ್ ಧಾರಣೆ ಮಾಡದೆ ಬಡಗಗುಳಿಪಾಡಿ ಗ್ರಾಮದ ಕೈಕಂಬದ ಬಳಿ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ. ಈ ಸಂದರ್ಭ ಕರ್ತವ್ಯನಿರತ ಬಜ್ಪೆ ಠಾಣಾ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ, ಆರೋಪಿ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎನ್ನಲಾಗ್ತಿದೆ.

ಮಂಗಳೂರಲ್ಲಿ ಓರ್ವನ ಬಂಧನ
ಈ ಹಿನ್ನೆಲೆಯಲ್ಲಿ ಆತನ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ-2020 ಉಲ್ಲಂಘನೆ ಮತ್ತು ವಿಪತ್ತು ಕಾರ್ಯ ನಿರ್ವಹಣಾ ಕಾಯ್ದೆ-2005 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿಯಲ್ಲಿ ಕೊರೊನಾ ತಡೆಗೆ ಕಠಿಣ ಕ್ರಮ:
ಕೊರೊನಾ ಕರ್ಫ್ಯೂ ಜಾರಿಯಾಗಿ ವಾರ ಕಳೆದರೂ ಸೋಂಕು ಕಡಿಮೆಯಾಗುತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಕ್ಕೆ ಮತ್ತಷ್ಟು ಕಠಿಣ ನಿಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿಯೂ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ತಾಲೂಕಿನಲ್ಲಿ ಅನಗತ್ಯವಾಗಿ ಓಡಾಡುತ್ತಿರುವವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ.

ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಮಾತ್ರ ಅವಕಾಶ ನೀಡಿದ್ದರೂ 10 ಗಂಟೆಯವರೆಗೂ ಪೇಟೆಯಲ್ಲಿ ವಾಹನ ಸಂಚಾರ ದಟ್ಟವಾಗಿತ್ತು. 10 ಗಂಟೆಯ ಬಳಿಕ ಬಂದ ಪ್ರತಿಯೊಂದು ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿ ಕಳುಹಿಸುತ್ತಿದ್ದಾರೆ.

ಅನಗತ್ಯವಾಗಿ ಬೈಕ್‌ನಲ್ಲಿ ತಿರುಗಾಡುತ್ತಿದ್ದವರ ಕೆಲವರಿಗೆ ಲಾಠಿ ರುಚಿ ತೋರಿಸುತ್ತಿದ್ದಾರೆ. ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ದಂಡವನ್ನೂ ವಿಧಿಸುತ್ತಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದವರಿಗೆ ಹಾಗೂ ಮಾಸ್ಕ್ ಹಾಕದೆ ಸಂಚರಿಸುತ್ತಿದ್ದವರಿಂದ ದಂಡ ವಸೂಲಿ ಮಾಡುತ್ತಿದ್ದಾರೆ.

ಇದನ್ನೂ ಓದಿ:ಒಂದೇ ಗ್ರಾಮದಲ್ಲಿ 62ಕ್ಕೂ ಹೆಚ್ಚು ಜನರಿಗೆ ಕೊರೊನಾ: ಸೋಂಕಿತರೆಲ್ಲರೂ ವಲಸೆ ಕಾರ್ಮಿಕರು

ಶುಕ್ರವಾರ ಬೆಳ್ತಂಗಡಿ ಠಾಣೆಯಲ್ಲಿ 17 ವಾಹನವನ್ನು ಜಪ್ತಿ ಮಾಡಲಾಗಿದ್ದು, ಎರಡು ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಿ, 25 ಜನ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಒಂದು ಅಂಗಡಿ ವಿರುದ್ಧ ಪ್ರಕರಣ, 4 ವಾಹನ ಜಪ್ತಿ, 40 ಮಾಸ್ಕ್ ಧರಿಸದ ಪ್ರಕರಣ ದಾಖಲಾಗಿವೆ. ಪುಂಜಾಲಕಟ್ಟೆ ಠಾಣೆಯಲ್ಲಿ 6 ವಾಹನ ಜಪ್ತಿ, 15 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ 2 ವಾಹನಗಳನ್ನು ಜಪ್ತಿ ಮಾಡಲಾಗಿದೆ.

Last Updated : May 8, 2021, 8:34 AM IST

ABOUT THE AUTHOR

...view details