ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ.
ದಕ್ಷಿಣಕನ್ನಡದಲ್ಲಿ ಏರಿಕೆಯಾಗುತ್ತಿದೆ ಕೊರೊನಾ ಸಾವಿನ ಶೇಕಡಾವಾರು ಪ್ರಮಾಣ - ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಲ್ಲಿ ಶೇಕಡ 2.55 ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಲ್ಲಿ ಶೇಕಡ 2.55 ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಇವರೆಗೆ ಒಟ್ಟು 4,811 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇದರಲ್ಲಿ 123 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಿಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆಯಲ್ಲಿ ಅತೀ ಹೆಚ್ಚು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ದ.ಕ ಜಿಲ್ಲೆ 2ನೇ ಸ್ಥಾನದಲ್ಲಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲಿಯೂ 2ನೇ ಸ್ಥಾನದಲ್ಲಿದೆ.
ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ನಿತ್ಯ 8 ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಬೇರೆ ಕಾಯಿಲೆಯಿಂದ ಬಳಲುತ್ತಿದ್ದವರಾಗಿದ್ದರೂ ಅವರಿಗೆ ಕೊರೊನಾ ದೃಢಪಟ್ಟಿರುವುದರಿಂದ ಕೊರೊನಾದಿಂದ ಮೃತಪಟ್ಟ ಪ್ರಕರಣ ಎಂದು ಪರಿಗಣಿಸಲಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವ ಶೇಕಡಾವಾರು ಪ್ರಮಾಣ ಹೆಚ್ಚಳವಾಗುತ್ತಿರುವುದು ಆತಂಕ ಸೃಷ್ಟಿಸಿದೆ.