ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಸಾವಿನ ಪ್ರಮಾಣವೂ ಹೆಚ್ಚುತ್ತಿರುವುದು ಆತಂಕ ಸೃಷ್ಟಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯವರೆಗೆ 3,596 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ 77 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಕುರಿತು ಮಾಹಿತಿ ಜಿಲ್ಲೆಯಲ್ಲಿ ನಿನ್ನೆ ಕೂಡ ಇಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಸಾವನ್ನಪ್ಪಿದವರಲ್ಲಿ ಹೊರ ಜಿಲ್ಲೆಯವರು 12 ಮಂದಿ ಇದ್ದು, 65 ಮಂದಿ ಜಿಲ್ಲೆಯವರಾಗಿದ್ದಾರೆ. 285 ಮಂದಿಗೆ ನಿನ್ನೆ ಕೊರೊನಾ ದೃಢಪಟ್ಟಿದ್ದು, ಈವರೆಗೆ 3,596 ಪ್ರಕರಣಗಳು ದೃಢಪಟ್ಟಿದೆ. ಇದರಲ್ಲಿ 1,491 ಮಂದಿ ಗುಣಮುಖರಾಗಿದ್ದು, 2,028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎರಡನೇ ಹಂತದಲ್ಲಿ ಐದನೇ ದಿನದ ಲಾಕ್ಡೌನ್ ನಡೆಯುತ್ತಿದ್ದು, ಇಂದು ಕೂಡ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.