ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಮಗುಗೆ ಕೊರೊನಾ ಪಾಸಿಟಿವ್​​, 15 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರು ಜಿಲ್ಲೆಯಲ್ಲಿ ಕೊರೊನಾ ಶಂಕೆ ಹಿನ್ನೆಲೆ ಇಂದು ಮತ್ತೆ 15 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

asdss
ಕೊರೊನಾ ಭೀತಿ: ಮಂಗಳೂರಿನಲ್ಲಿ 15 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

By

Published : Mar 27, 2020, 8:00 PM IST

ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆ ಇಂದು 15 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಹಿಂದೆ ಕಳುಹಿಸಲಾದ 5 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ಬಂದಿದ್ದು, ಇದರಲ್ಲಿ 1 ಪಾಸಿಟಿವ್, 4 ನೆಗೆಟಿವ್ ಬಂದಿದೆ. ಹತ್ತು ತಿಂಗಳ ಮಗುವಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟವರ ಸಂಖ್ಯೆ 6ಕ್ಕೇರಿದೆ. ಇಂದು 64 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38115 ಜನರ ಸ್ಕ್ರೀನಿಂಗ್ ಮಾಡಿದಂತಾಗಿದೆ.

ಹೋಮ್ ಕ್ವಾರಂಟೈನ್​ನಲ್ಲಿ 3032 ಮಂದಿ ಇದ್ದು, 28 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದಾರೆ. ಇಂದಿಗೆ 20 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಜಿಲ್ಲೆಯಲ್ಲಿ ಇಂದು ಮತ್ತೆ 6 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾದಲ್ಲಿ ಇಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಿಸಿದೆ.

ABOUT THE AUTHOR

...view details