ಕರ್ನಾಟಕ

karnataka

ETV Bharat / state

ದ.ಕನ್ನಡ ಜಿಲ್ಲೆಯಲ್ಲಿ 208 ಮಂದಿಗೆ ಕೊರೊನಾ ದೃಢ, ಪ್ರಾಣ ಕಳೆದುಕೊಂಡ 7 ಮಂದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 208 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 65 ಮಂದಿಗೆ, ಐಎಲ್ಐನಿಂದ 73 ಮಂದಿಗೆ ಹಾಗು ಸಾರಿಯಿಂದ 12 ಮಂದಿಗೆ ಕೋವಿಡ್​ ದೃಢಪಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 208 ಮಂದಿಗೆ ಕೊರೊನಾ ದೃಢ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 208 ಮಂದಿಗೆ ಕೊರೊನಾ ದೃಢ

By

Published : Jul 29, 2020, 8:31 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 208 ಮಂದಿಗೆ ಕೊರೊನಾ ದೃಢಪಟ್ಟಿದೆ. 7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಏಳು ಮಂದಿಯ ಪೈಕಿ ತಲಾ ಒಬ್ಬರು ಉಡುಪಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಯಿಂದಲೂ ನಾಲ್ಕು ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದವರಾಗಿದ್ದಾರೆ.

ಉಡುಪಿ ಜಿಲ್ಲೆಯ ಪಡುಬಿದ್ರೆಯ 52 ವರ್ಷದ ಪುರುಷ, ಧಾರವಾಡ ಜಿಲ್ಲೆಯ 66 ವರ್ಷದ ವೃದ್ಧ, ಉತ್ತರ ಕನ್ನಡ ಜಿಲ್ಲೆಯ ಕಾರವಾರದ 66 ವರ್ಷದ ವೃದ್ಧ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 62 ವರ್ಷದ ವೃದ್ಧ, ಮಂಗಳೂರಿನ 69 ವರ್ಷದ ವೃದ್ಧೆ, 73 ವರ್ಷದ ವೃದ್ಧ, 39 ವರ್ಷದ ಪುರುಷ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಂದು 208 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 65 ಮಂದಿಗೆ, ಐಎಲ್ಐನಿಂದ 73 ಮಂದಿಗೆ, ಸಾರಿಯಿಂದ 12 ಮಂದಿಗೆ ಕೋವಿಡ್​ ದೃಢಪಟ್ಟಿದೆ. ಈವರೆಗೆ 5,311 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದು 118 ಮಂದಿ ಗುಣಮುಖರಾಗಿದ್ದು, ಈವರೆಗೆ 2,456 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. 2,715 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details