ಕರ್ನಾಟಕ

karnataka

ETV Bharat / state

ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಗೂ ವಕ್ಕರಿಸಿದ ಮಹಾಮಾರಿ ಕೋವಿಡ್​! - Wenlock Hospital

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ಅತ್ತೆಗೆ ಕೊರೊನಾ ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.

sddd
ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಗೂ ವಕ್ಕರಿಸಿದ ಮಹಾಮಾರಿ ಕೋವಿಡ್​.!

By

Published : Apr 23, 2020, 12:58 PM IST

ಮಂಗಳೂರು: ಕೊರೊನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ಅತ್ತೆಗೆ ಕೊರೊನಾ ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.

ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟ ಮಹಿಳೆಯ ಸಂಪರ್ಕದಿಂದ ಈಕೆಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರೀಕ್ಷೆ ನಡೆಸಿದಾಗ ಕೊರೊನಾ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈಗ ನಾಲ್ಕು ಮಂದಿ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಜಿಲ್ಲೆಯಲ್ಲಿ 12 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ABOUT THE AUTHOR

...view details