ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಮಿತಿಮೀರಿದ ಹಿನ್ನೆಲೆ, ಲಾಕ್ಡೌನ್ ಘೋಷಿಸಲಾಗಿದ್ದು, ಲಾಕ್ಡೌನ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದ.ಕನ್ನಡದಲ್ಲಿ ಮಿತಿ ಮೀರಿದ ಕೊರೊನಾ: ಲಾಕ್ಡೌನ್ಗೆ ಸಹಕರಿಸುತ್ತಿರುವ ತುಳುನಾಡು - ಲಾಕ್ಡೌನ್ ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಲಾಕ್ಡೌನ್ ಮಾಡಲಾಗಿದ್ದು, ಮಂಗಳೂರಿನ ಜನತೆ ಸಹ ಎರಡನೆ ಹಂತದ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ 311 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 3074 ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ನಿನ್ನೆ 115 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 1278 ಮಂದಿ ಕೊರೊನಾದಿಂದ ಗುಣಮುಖರಾದಂತಾಗಿದೆ. ಇನ್ನುಳಿದಂತೆ 1725 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡನೇ ಹಂತದ ಲಾಕ್ಡೌನ್ ಜಾರಿಯಾಗಿದ್ದು, ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಕಾರಣದಿಂದ ಬೆಳಿಗ್ಗೆ ಸಮಯದಲ್ಲಿ ಖಾಸಗಿ ವಾಹನಗಳ ಸಂಚಾರ ಕೊಂಚ ಮಟ್ಟಿಗೆ ಕಂಡುಬಂದರೂ ಸಹ ಉಳಿದಂತೆ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಬ್ಧವಾಗಿದೆ.