ಕಡಬ ( ದಕ್ಷಿಣ ಕನ್ನಡ): ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಕಡಬದ ಬ್ಯಾಂಕ್ ಮತ್ತು ಕೃಷಿ ಸಹಕಾರಿ ಸಂಘದ ಸಿಬ್ಬಂದಿ ಸೇರಿದಂತೆ ಒಟ್ಟು 162 ಮಂದಿಗೆ ಹೋಮ್ ಕ್ವಾರಂಟೈನ್ ಮಾಡುವ ಬಗ್ಗೆ ಚರ್ಚೆ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಕಡಬದ ವ್ಯಕ್ತಿಯಲ್ಲಿ ಕೊರೊನಾ: 162 ಮಂದಿಗೆ ಹೋಮ್ ಕ್ವಾರಂಟೈನ್
ಕಿಡ್ನಿ ಸಂಬಂಧಿತ ಕಾಯಿಲೆ ಕಾರಣದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವ್ಯಕ್ತಿ ದಾಖಲಾಗಿದ್ದು, ಬಳಿಕ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಸೋಂಕು ತಗುಲಿರುವುದು ದೃಢವಾಗಿದೆ. ಈ ವ್ಯಕ್ತಿ ಕಡಬದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ಬ್ಯಾಂಕ್ಗೆ ಭೇಟಿ ನೀಡಿದ್ದರು.
ಕೊರೊನಾ
ಕಿಡ್ನಿ ಸಂಬಂಧಿತ ಕಾಯಿಲೆ ಕಾರಣದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವ್ಯಕ್ತಿ ದಾಖಲಾಗಿದ್ದು, ಬಳಿಕ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಸೋಂಕು ತಗುಲಿರುವುದು ದೃಢವಾಗಿದೆ. ಈ ವ್ಯಕ್ತಿ ಕಡಬದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕ್ಗೆ ಭೇಟಿ ನೀಡಿದ್ದರು.
ಬ್ಯಾಂಕ್ನ 22 ಮಂದಿ ಮತ್ತು ಬ್ಯಾಂಕ್ಗೆ ಆಗಮಿಸಿದ್ದ 140 ಜನ ಬ್ಯಾಂಕ್ ಗ್ರಾಹಕರು ಸೇರಿ ಒಟ್ಟು 162 ಮಂದಿಯನ್ನು ಸುರಕ್ಷತಾ ದೃಷ್ಟಿಯಿಂದ ಹೋಮ್ ಕ್ವಾರಂಟೈನ್ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಈ ಹಿನ್ನೆಲೆ ಕಡಬದ ಕೃಷಿ ಸಹಕಾರಿ ಸಂಘದಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ.
Last Updated : Jun 8, 2020, 10:41 AM IST