ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಮಹಿಳೆಗೆ ಕೊರೊನಾ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 55ಕ್ಕೇರಿದೆ.
ಮಂಗಳೂರಿನಲ್ಲಿ ಇಂದು ಓರ್ವ ಮಹಿಳೆಗೆ ಕೊರೊನಾ ದೃಢ: ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆ - ಮಂಗಳೂರಿನಲ್ಲಿ ಇಂದು ಮಹಿಳೆಗೆ ಕೊರೊನಾ
ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಇದರಲ್ಲಿ 17 ಮಂದಿ ಗುಣಮುಖರಾಗಿದ್ದು, ಐವರು ಸಾವನ್ನಪ್ಪಿದ್ದಾರೆ. 33 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರಿನಲ್ಲಿ ಇಂದು ಓರ್ವ ಮಹಿಳೆಗೆ ಕೊರೊನಾ ದೃಢ
ನಗರದ ನೀರುಮಾರ್ಗದ ಕುಟ್ಟಿಕಾಲದ 40 ವರ್ಷದ ಮಹಿಳೆಗೆ ಕೊರೊನಾ ದೃಢಪಟ್ಟಿದೆ. ಈ ಮಹಿಳೆ ಮೇ 10ರಂದು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಮೇ 17ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೊನಾ ದೃಢಪಟ್ಟಿದೆ.
ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಇದರಲ್ಲಿ 17 ಮಂದಿ ಗುಣಮುಖರಾಗಿದ್ದು, ಐವರು ಸಾವನ್ನಪ್ಪಿದ್ದಾರೆ. 33 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.