ಕರ್ನಾಟಕ

karnataka

ETV Bharat / state

ದ.ಕ. ಜಿಲ್ಲೆಯಲ್ಲಿಂದು 17 ಮಂದಿ ಕೊರೊನಾ ಸೋಂಕಿತರು ಗುಣಮುಖ

ದ.ಕ.ಜಿಲ್ಲೆಯಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 17 ಮಂದಿ ಕೊರೊನಾ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದು ವರೆಗೆ 271 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 146 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 118 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ.

ದ.ಕ.ಜಿಲ್ಲೆಯಲ್ಲಿ 17 ಮಂದಿ ಕೋವಿಡ್ ಸೋಂಕಿತರು ಗುಣಮುಖ
ದ.ಕ.ಜಿಲ್ಲೆಯಲ್ಲಿ 17 ಮಂದಿ ಕೋವಿಡ್ ಸೋಂಕಿತರು ಗುಣಮುಖ

By

Published : Jun 13, 2020, 9:05 PM IST

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 17 ಮಂದಿ ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಇವರಲ್ಲಿ 14 ಹಾಗೂ 17 ವರ್ಷದ ಇಬ್ಬರು ಬಾಲಕಿಯರು, ಓರ್ವ ಮಹಿಳೆ ಸೇರಿ 14 ಮಂದಿ ಪುರುಷರಿದ್ದಾರೆ. ಇವರು 14 ದಿನಗಳ ಕಾಲ ಹೋಮ್ ಕ್ವಾರಂಟೈನ್​​ನಲ್ಲಿರಲಿದ್ದಾರೆ.

ಜಿಲ್ಲಾಧಿಕಾರಿ ಪ್ರಕಟಣೆ

ಕೋವಿಡ್ -19 ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 258 ಮಂದಿಯ ಗಂಟಲು ದ್ರವ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 196 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 30 ಜನರಲ್ಲಿ ಸೋಂಕು ದೃಢಪಟ್ಟಿದ್ದು, 166 ಮಂದಿಯಲ್ಲಿ ವರದಿ ನೆಗೆಟಿವ್ ಬಂದಿದೆ. 21 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 29 ಮಂದಿ ನಿಗಾದಲ್ಲಿದ್ದಾರೆ. ಇಂದು 178 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 43,251 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.

ಓದಿ:ದಕ್ಷಿಣ ಕನ್ನಡ ಜಿಲ್ಲೆಗೆ ಸೌದಿ ಶಾಕ್: ಇಂದು 30 ಮಂದಿಯಲ್ಲಿ ಕೊರೊನಾ ದೃಢ

ಈ ವರೆಗೆ 10,675 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಈ ವರೆಗೆ 10,462 ಮಂದಿಯ ವರದಿ ಬಂದಿದೆ. ಅದರಲ್ಲಿ 10,191 ಮಂದಿಯ ವರದಿ ನೆಗೆಟಿವ್ ಬಂದಿದೆ. 271 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 146 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 118 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಕಟಣೆ ಹೊರಬಿದ್ದಿದೆ.

ABOUT THE AUTHOR

...view details