ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು,ಮಡಿಕೇರಿ ಮೂಲದ 47 ವರ್ಷದ ಪುರುಷ, ಕೊರೊನಾದಿಂದ ಸಾವನ್ನಪ್ಪಿದ್ದಾನೆ. ನಿನ್ನೆ ಅವರನ್ನು ಖಾಸಗಿ ಆಸ್ಪತ್ರೆಯಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬ ಬಲಿ! - Corona infected death
ದಕ್ಷಿಣ ಕನ್ನಡದಲ್ಲಿಂದು ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬ ಬಲಿ
ಆ ಸಂದರ್ಭದಲ್ಲಿ ಅವರ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಂಜೆ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯು ಅಧಿಕ ರಕ್ತದೊತ್ತಡ, ಮಧುಮೇಹ, ಮೂತ್ರಪಿಂಡ ವೈಫಲ್ಯ ರೋಗದಿಂದ ಬಳಲುತ್ತಿದ್ದರು. ಕೋವಿಡ್ ಸೋಂಕು ದೃಢಪಟ್ಟಿರುವ ಕಾರಣ ಚಿಕಿತ್ಸೆ ನೀಡಲಾಗುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.