ಬೆಳ್ತಂಗಡಿ:ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳನ್ನು ಮನೆಯಿಂದ ಕರೆದುಕೊಂಡು ಹೋಗಿ ಅನಧಿಕೃತವಾಗಿ ವಿವಾಹವಾಗಿರುವ ಆರೋಪದಲ್ಲಿ ಬಂಧಿತನಾಗಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಆರೋಪಿಗೆ ಕೊರೊನಾ ಸೋಂಕು: ಪೊಲೀಸ್ ಸಿಬ್ಬಂದಿಗೆ ಕ್ವಾರಂಟೈನ್ - Quarantine for police
ಅಪ್ರಾಪ್ತ ಬಾಲಕಿಯೊಬ್ಬಳನ್ನು ಅನಧಿಕೃತವಾಗಿ ವಿವಾಹವಾದ ಆರೋಪದಡಿಯಲ್ಲಿ ಬಂಧನವಾಗಿರುವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ 5 ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
ಕೊರೊನಾ ಸೋಂಕು
ಈತನಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ 4 ಮಂದಿ ಕಾನ್ಸ್ಟೇಬಲ್, ಒಬ್ಬರು ಮಹಿಳಾ ಹೋಮ್ ಗಾರ್ಡ್ ಸೇರಿ 5 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.