ಕರ್ನಾಟಕ

karnataka

ETV Bharat / state

ಕೊರೊನಾ ಶಂಕೆ: ಮಂಗಳೂರಿನಲ್ಲಿ 24 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - mangalore news

ಈವರೆಗೆ 356 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 344 ನೆಗೆಟಿವ್ ಬಂದಿವೆ. ಇಂದು 92 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,813 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ಕೊರೊನಾ: ಜಿಲ್ಲೆಯಲ್ಲಿಂದು ಒಂದೂ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ

By

Published : Apr 9, 2020, 9:30 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೋವಿಡ್-19ರ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ನಿನ್ನೆ ಪ್ರಯೋಗಾಲಯಕ್ಕೆ ಕಳುಹಿಸಲಾದ 8 ವರದಿಗಳು ನೆಗೆಟಿವ್ ಬಂದಿದ್ದು, ಇಂದು 24 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈವರೆಗೆ 356 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 344 ನೆಗೆಟಿವ್ ಬಂದಿವೆ. ಇಂದು 92 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,813 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್​​​ನಲ್ಲಿ 3,352 ಮಂದಿ ಇದ್ದು, 12 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​​​​​ನಲ್ಲಿ ಇದ್ದಾರೆ.

ಜಿಲ್ಲಾಡಳಿತದ ಪ್ರಕಟಣೆ

ಇಂದಿಗೆ 2,594 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಎಂಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ABOUT THE AUTHOR

...view details