ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ 9 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈವರೆಗೆ 348 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಇದರಲ್ಲಿ 12 ಪಾಸಿಟಿವ್ ಮತ್ತು 336 ನೆಗೆಟಿವ್ ಬಂದಿದೆ. ಇಂದು 20 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಈವರೆಗೆ ಒಟ್ಟು 38,701 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.
ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ: ದಕ್ಷಿಣ ಕನ್ನಡ ಜಿಲ್ಲಾಡಳಿತ - ಮಂಗಳೂರು
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನನಿತ್ಯ ಏರಿಕೆಯಾಗ್ತಿದೆ. ಈ ನಡುವೆ ಇಂದು ಮಂಗಳೂರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಈವರೆಗೆ 348 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಇದರಲ್ಲಿ 12 ಪಾಸಿಟಿವ್ ಮತ್ತು 336 ನೆಗೆಟಿವ್ ಬಂದಿದೆ ಅಂತ ಪ್ರಕಟಣೆಯಲ್ಲಿ ತಿಳಸಿದೆ.
ಹೋಮ್ ಕ್ವಾರಂಟೈನ್ನಲ್ಲಿ 3,635 ಮಂದಿ ಇದ್ದು 11 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 2,311 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಎಂಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ನಿತ್ಯ ಏರಿಕೆಯಾಗ್ತಿದೆ. ಈ ನಡುವೆ ಇಂದು ಮಂಗಳೂರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಈವರೆಗೆ 348 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 336 ನೆಗೆಟಿವ್ ಬಂದಿದೆ ಅಂತ ಪ್ರಕಟಣೆಯಲ್ಲಿ ತಿಳಸಿದೆ.