ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲೂ ಕೊರೊನಾ ಭೀತಿ: 6 ಮಂದಿಯ ಗಂಟಲು ದ್ರವ ಪ್ರಯೋಗಾಲಯಕ್ಕೆ ರವಾನೆ

ಕೊರೊನಾ ವೈರಸ್ ಭೀತಿ ಎಲ್ಲೆಡೆ ಆವರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿಲ್ಲ.

corona virus
ಕೊರೊನಾ ವೈರಸ್​

By

Published : Mar 13, 2020, 9:50 PM IST

ಮಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಗಾ ವಹಿಸಿದ್ದು, ಇಂದು ಆರು ಮಂದಿಯ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಹಿಂದೆ ಕಳುಹಿಸಲಾಗಿದ್ದ ನಾಲ್ಕು ಮಂದಿಯ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಇದರಲ್ಲಿ ಯಾರಿಗೂ ಕೊರೊನಾ ಸೋಂಕು ಇಲ್ಲವೆಂದು ದೃಢಪಟ್ಟಿದೆ.

ಮಂಗಳೂರಿನಲ್ಲೂ ಕೊರೊನಾ ಭೀತಿ

ವಿದೇಶದಿಂದ ಬಂದಿರುವ 54 ಮಂದಿ ವೈದ್ಯಕೀಯ ನಿಗಾದಲ್ಲಿದ್ದಾರೆ. ಚೀನಾ, ಇಟಲಿ, ಸ್ಪೇನ್, ಫ್ರಾನ್ಸ್, ಜರ್ಮನಿ​​, ಇರಾನ್ ಮತ್ತು ದಕ್ಷಿಣ ಕೊರಿಯಾ ರಾಷ್ಟ್ರಗಳಿಂದ ಫೆ. 15 ರಿಂದ ಆಗಮಿಸಿರುವ ಪ್ರಯಾಣಿಕರು ಕಡ್ಡಾಯವಾಗಿ ವೈದ್ಯಕೀಯ ನಿಗಾದಲ್ಲಿ ಇರತಕ್ಕದ್ದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details