ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕು: ಮೊದಲ ಪ್ರಕರಣ ಪತ್ತೆ

ದಕ್ಷಿಣ ಕನ್ನಡದಲ್ಲಿ ನಿನ್ನೆ ದಿನ 82 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕು
ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕು

By ETV Bharat Karnataka Team

Published : Dec 21, 2023, 11:13 AM IST

Updated : Dec 21, 2023, 1:04 PM IST

ಮಂಗಳೂರು: ಕೇರಳದಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಬುಧವಾರದಿಂದಷ್ಟೆ ಕೊರೊನಾ ತಪಾಸಣೆ ಆರಂಭಿಸಿತ್ತು. ಮೊದಲ ದಿನವೆ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಉಡುಪಿ ಜಿಲ್ಲೆಯ 82 ವರ್ಷದ ವೃದ್ದರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕೊರೊನಾ ತಪಾಸಣೆ ನಡೆಸಿದಾಗ ಪಾಸಿಟಿವ್ ಬಂದಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಮಾತನಾಡಿ, ಉಡುಪಿ ಜಿಲ್ಲೆಯ ವ್ಯಕ್ತಿಯೊಬ್ಬರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಅವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ಐಸೋಲೇಸನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ ಜಿಲ್ಲೆಯ ಆರೋಗ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಕೊರೊನಾ ಟೆಸ್ಟಿಂಗ್​ ಹೆಚ್ಚಳ:ಕೊರೊನಾ ರೂಪಾಂತರ ತಳಿ ಪ್ರಕರಣ ಹೆಚ್ಚಾಗುತ್ತಿದ್ದಂತೆರಾಜ್ಯದಲ್ಲಿಕೊರೊನಾ ಟೆಸ್ಟಿಂಗ್ ಹೆಚ್ಚು ಮಾಡಲಾಗಿದೆ. ನೆರೆಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಆರ್​ಟಿಪಿಸಿಆರ್ ಟೆಸ್ಟ್ ಹೆಚ್ಚಳ ಮಾಡಲಾಗಿದೆ. ಸದ್ಯ ನಿತ್ಯ 5,000 ಟೆಸ್ಟಿಂಗ್ ಮಾಡಲಾಗುತ್ತಿದೆ.

60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್​ ಕಡ್ಡಾಯ: ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದೆ. 60 ವರ್ಷದ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮಾಸ್ಕ್ ಧರಿಸುವುದು ಸೇರಿದಂತೆ ಹಲವರು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಕ್ರಿಸ್​ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನದಟ್ಟಣೆಯಿಂದಾಗಿ ಮತ್ತಷ್ಟು ಪ್ರಕರಣಗಳ ಹೆಚ್ಚಳವಾಗುವ ಸಂಭವವಿದೆ. ಹಾಗಾಗಿ, ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕೋವಿಡ್ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿಯನ್ನು ಶಿಫಾರಸು ಮಾಡಿದೆ. ಜತೆಗೆ ಎಲ್ಲ ಹಿರಿಯ ನಾಗರೀಕರು 60 ವರ್ಷ ಹಾಗೂ ಮೇಲ್ಪಟ್ಟವರು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕಡ್ಡಯಾವಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಲಾಗಿದೆ.

ಗಡಿ ರಾಜ್ಯದಲ್ಲಿ ಹೆಚ್ಚಾದ ಪ್ರಕರಣಗಳು:ಗಡಿ ರಾಜ್ಯ ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಅಲರ್ಟ್​ ಆಗಿದೆ. ರಾಜ್ಯದಲ್ಲಿ ಕೋವಿಡ್​ ರೂಪಾಂತರ ತಳಿ ಜೆಎನ್​1 ಪತ್ತೆಯಾಗಿದ್ದು ಡಿಸೆಂಬರ್​ 20ರಂದು ಒಟ್ಟು 300 ಹೊಸ ಕೋವಿಡ್​​ ಪ್ರಕರಣಗಳು ದಾಖಲಾಗಿವೆ. ಈವರೆಗೆ ಮೂವರ ಸಾವು ಸಂಭವಿಸಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿ ಬಿಡುಗಡೆ ಮಾಡಿದೆ.

ಇದೀಗ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2669 ಆಗಿದೆ. ಕಳೆದ ಮೂರು ವರ್ಷಗಳ ಹಿಂದೆ ಕೋವಿಡ್​ ಪತ್ತೆಯಾದಗಿನಿಂದ ಕೇರಳದಲ್ಲಿ ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 72,056 ಆಗಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಕೋವಿಡ್​ನಿಂದ ಚೇತರಿಕೆ ಕಂಡು ಡಿಸ್ಚಾರ್ಜ್​ ಆದವರ ಸಂಖ್ಯೆ 224 ಆಗಿದೆ. ರಾಜ್ಯದಲ್ಲಿ ಒಟ್ಟು 68,37,203 ಪ್ರಕರಣಗಳು ಇಲ್ಲಿಯವರೆಗೆ ದಾಖಲಾಗಿದೆ.

ಸೋಂಕಿನ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಇದರ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ. ಕೋವಿಡ್​ ರೋಗಿಗಳಿಗಾಗಿ ಐಸೋಲೇಷನ್​ ವಾರ್ಡ್​​, ರೂಂ, ಆಕ್ಸಿಜನ್​ ಬೆಡ್​, ಐಸಿಯು ಬೆಡ್​​ ಮತ್ತು ವೆಂಟಿಲೇಟರ್​ ವ್ಯವಸ್ಥೆ ಮಾಡಲಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್​​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಒಂದೇ ದಿನದಲ್ಲಿ ಪತ್ತೆಯಾದವು 300 ಸಕ್ರಿಯ ಕೋವಿಡ್​ ಪ್ರಕರಣಗಳು: 3 ಸಾವು.. ಮಂಗಳೂರಲ್ಲಿ ಒಬ್ಬರಿಗೆ ಪಾಸಿಟಿವ್​

Last Updated : Dec 21, 2023, 1:04 PM IST

ABOUT THE AUTHOR

...view details