ಮಂಗಳೂರು:ದ.ಕ.ಜಿಲ್ಲೆಯಲ್ಲಿಂದು ಬರೋಬ್ಬರಿ 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,848ಕ್ಕೆ ಏರಿಕೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 139 ಮಂದಿಗೆ ಕೊರೊನಾ.. 51 ಮಂದಿ ಡಿಶ್ಚಾರ್ಜ್
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 51 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 1,848 ಸೋಂಕಿತರ ಪೈಕಿ 753 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಇದರಲ್ಲಿ ಅಂತಾರಾಷ್ಟ್ರೀಯ ಪ್ರಯಾಣದಿಂದ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ರೆ, ಐಎಲ್ಐ ಪ್ರಕರಣದಲ್ಲಿ 27ಮಂದಿಗೆ, ಎಸ್ಎಆರ್ಐ ಪ್ರಕರಣದಲ್ಲಿ 25ಮಂದಿಗೆ, ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 50ಮಂದಿಗೆ, ರ್ಯಾಂಡಮ್ ತಪಾಸಣೆಯಿಂದ 48 ಮಂದಿಗೆ ಸೋಂಕು ದೃಢಗೊಂಡಿದೆ. ಇನ್ನೂ 17 ಮಂದಿಯ ಸೋಂಕಿನ ಮೂಲ ತಿಳಿದು ಬಂದಿಲ್ಲ.
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 51 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 1,848 ಸೋಂಕಿತರ ಪೈಕಿ 753 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ 38 ಮಂದಿ ಸಾವನ್ನಪ್ಪಿದ್ದು, 1,057 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.