ಮಂಗಳೂರು: ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಇದೀಗ ದ.ಕ.ಜಿಲ್ಲೆಗೆ ಕೋವಿಡ್ ನೆಗೆಟಿವ್ ವರದಿಯೊಂದಿಗೆ ಬಂದಿದ್ದ ಕೇರಳದ 228 ವಿದ್ಯಾರ್ಥಿಗಳಿಗೆ ಪಾಸಿಟಿವ್ ಕಾಣಿಸಿಕೊಂಡಿದೆ.
ನೆಗೆಟಿವ್ ವರದಿಯೊಂದಿಗೆ ಬಂದಿದ್ದ ಕೇರಳದ 228 ವಿದ್ಯಾರ್ಥಿಗಳಿಗೆ ಪಾಸಿಟಿವ್
ದ.ಕ.ಜಿಲ್ಲೆಯಲ್ಲಿನ ವಿವಿಧ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 228 ಮಂದಿ ಕೇರಳದ ವಿದ್ಯಾರ್ಥಿಗಳಿಗೆ ಕಳೆದ 10 ದಿನಗಳ ಒಳಗೆ ಸೋಂಕು ಕಾಣಿಸಿಕೊಂಡಿದೆ.
ನೆಗೆಟಿವ್ ವರದಿಯೊಂದಿಗೆ ಬಂದಿದ್ದ ಕೇರಳದ 228 ವಿದ್ಯಾರ್ಥಿಗಳಿಗೆ ಪಾಸಿಟಿವ್
ದ.ಕ.ಜಿಲ್ಲೆಯಲ್ಲಿನ ವಿವಿಧ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 228 ಮಂದಿ ಕೇರಳದ ವಿದ್ಯಾರ್ಥಿಗಳಿಗೆ ಕಳೆದ 10 ದಿನಗಳ ಒಳಗೆ ಸೋಂಕು ಕಾಣಿಸಿಕೊಂಡಿದೆ. ಪರೀಕ್ಷೆ ನಿಮಿತ್ತ ನೆಗೆಟಿವ್ ವರದಿಯೊಂದಿಗೆ ಜಿಲ್ಲೆಗೆ ವಿದ್ಯಾರ್ಥಿಗಳು ಆಗಮಿಸಿದ್ದರು. ಆದರೆ, ಇಲ್ಲಿ ಆರ್ಟಿಪಿಸಿಆರ್ ತಪಾಸಣೆ ಮಾಡಲಾಗಿದ್ದು, ವರದಿಯಲ್ಲಿ ಕೇರಳದ 228 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ.
ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಅವರಿಗೆ ಪ್ರತ್ಯೇಕ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಡಿಎಚ್ಒ ಡಾ.ಕಿಶೋರ್ ಕುಮಾರ್ ಹೇಳಿದರು.