ಮಂಗಳೂರು: ಕೊರೊನಾ ಸೋಂಕಿನ ಟೆಸ್ಟ್ ರಿಸಲ್ಟ್ ವಿಳಂಬವಾಗದಂತೆ ನೀಡಲು ನೂತನ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು 25 ಲಕ್ಷ ರೂ. ವೆಚ್ಚದಲ್ಲಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ಅಳವಡಿಸಲಾಗುವುದು ಎಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆ ನೀಡುವ ಕುರಿತು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಯ ಫಲಿತಾಂಶ ವಿಳಂಬವಿಲ್ಲದೇ ದೊರೆಯಬೇಕು ಎಂಬ ಉದ್ದೇಶದಿಂದ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ 3 ನೇ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು 25 ಲಕ್ಷ ರೂ ವೆಚ್ಚದಲ್ಲಿ 3 ದಿನದ ಒಳಗಾಗಿ ಅಳವಡಿಸಲಾಗುವುದು, ಇದರಿಂದ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ಮಾಡಲು ಅನುಕೂಲವಾಗುತ್ತದೆ ಎಂದರು.