ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಹೊಟೇಲ್ ಒಂದರಲ್ಲಿ ಐದು ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ ಮಾಹಿತಿ ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ಹೊಟೇಲ್ ಸಿಬ್ಬಂದಿಗೆ ಕೊರೊನಾ: ಸ್ಥಳೀಯರಲ್ಲಿ ಆತಂಕ - Corona in Dakshina Kannada District
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು ತಗುಲಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕುಕ್ಕೆ ಸುಬ್ರಹ್ಮಣ್ಯದ ಹೊಟೇಲ್ ಸಿಬ್ಬಂದಿಗೆ ಕೊರೊನಾ
ಕೆಲ ದಿನಗಳ ಹಿಂದೆ ಇದೇ ಹೋಟೆಲ್ನ ಮೂರು ಮಂದಿಗೆ ಕೊರೊನಾ ದೃಢಪಟ್ಟಿತ್ತು. ಇದೀಗ ಮತ್ತೆ ಐದು ಮಂದಿಗೆ ಕೊರೊನಾ ವಕ್ಕರಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕುಕ್ಕೆ ಸುಬ್ರಹ್ಮಣ್ಯದ ಮುಖ್ಯ ರಸ್ತೆಯಲ್ಲಿರುವ ಈ ಹೋಟೆಲ್ಅನ್ನು ಅಧಿಕಾರಿಗಳು ಈಗ ಸೀಲ್ ಡೌನ್ ಮಾಡಿದ್ದಾರೆ.