ಕಡಬ: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಧರ್ಮಗುರು, ಕೊಯಿಲ ಸಮೀಪದ ಮೂರು ಜನ ಸೇರಿದಂತೆ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿದೆ.
ಕಡಬ ಪಂಚಾಯತ್ ಆಡಳಿತಾಧಿಕಾರಿಗೆ ಕೊರೊನಾ: ಕಚೇರಿ ಸೀಲ್ಡೌನ್ - ದಕ್ಷಿಣ ಕನ್ನಡ ಜಿಲ್ಲೆಯ ಕಡಬ
ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಕೊರೊನಾ ಸೋಂಕು ತಗುಲಿದ್ದು, ಪಟ್ಟಣ ಪಂಚಾಯತ್ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.
ಕಡಬ ಪಂಚಾಯತ್ ಆಡಳಿತಾಧಿಕಾರಿಗೆ ಕೊರೊನಾ
ಈ ಹಿನ್ನೆಲೆ ಪಟ್ಟಣ ಪಂಚಾಯತ್ ಕಚೇರಿಯನ್ನು ಮುಂದಿನ 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಪಟ್ಟಣ ಪಂಚಾಯತ್‌ನಲ್ಲಿ ಕೊರೊನಾ ಕಾರ್ಯ ಪಡೆಯ ಸಭೆಯನ್ನು ಜುಲೈ 28ರಂದು ನಡೆಸಲು ಉದ್ದೇಶಿಸಲಾಗಿತ್ತು.
ಆದರೆ ಈಗ ಕಚೇರಿ ಸೀಲ್ಡೌನ್ ಮಾಡಿರುವ ಹಿನ್ನೆಲೆ ಸಭೆ ಮುಂದೂಡಲಾಗಿದೆ ಎಂದು ಪಟ್ಟಣ ಪಂಚಾಯತ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪಂಚಾಯತ್ ಸಿಬ್ಬಂದಿಯ ಕೊರೊನಾ ಪರೀಕ್ಷೆ ಇನ್ನಷ್ಟೇ ನಡೆಯಬೇಕಿದೆ.