ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 255 ಮಂದಿಯ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೊರೊನಾ ಭೀತಿ: ಇಂದು 255 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - Coronal panic attacks
ಮಂಗಳೂರಿನಲ್ಲಿ 892 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 15 ಪಾಸಿಟಿವ್ ಮತ್ತು 877 ನೆಗೆಟಿವ್ ಬಂದಿದೆ.
ಈ ಹಿಂದೆ ಕಳುಹಿಸಲಾದ 25 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 25 ಕೂಡ ನೆಗೆಟಿವ್ ಬಂದಿದೆ. ಈವರೆಗೆ 892 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 15 ಪಾಸಿಟಿವ್ ಮತ್ತು 877 ನೆಗೆಟಿವ್ ಬಂದಿದೆ.
ಇಂದು 56 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39,182ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ನಲ್ಲಿ 47 ಮಂದಿ ಇದ್ದು 34 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 6,026 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.