ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮಂಗಳವಾರ 17 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೊರೊನಾ ಶಂಕೆ: ಮಂಗಳೂರಲ್ಲಿ ಮತ್ತೆ 17 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - 17 people throat fluid send to test
ಮಂಗಳೂರಿನಲ್ಲಿ ಮಂಗಳವಾರ 17 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇಂದು 41 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,320 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.
ಈ ಹಿಂದೆ ಕಳುಹಿಸಲಾದ 9 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 8 ನೆಗೆಟಿವ್ ಬಂದಿದ್ದು, 1 ಪಾಸಿಟಿವ್ ಎಂದು ದೃಢಪಟ್ಟಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟವರು 9 ಮಂದಿ ಇದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ 41 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,320 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.
ಹೋಮ್ ಕ್ವಾರಂಟೈನ್ನಲ್ಲಿ 5875 ಮಂದಿ ಇದ್ದು, 28 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. 169 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಜಿಲ್ಲೆಯಲ್ಲಿ 5 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾದಲ್ಲಿ ಇಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.